ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.
ಬಂಧನದಿಂದ ರಕ್ಷಣೆ ಕೋರಿ ಡಿ.ಕೆ.ಶಿವಕುಮಾರ್ ದೆಹಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ನೋಟೀಸ್ ಜಾರಿ ಮಾಡಿದೆ.
ಅಲ್ಲದೇ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಹಿಂದೆ ಕೇಸ್ ರದ್ದು ಮಾಡುವಂತೆ ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಹಿಂದಿನ ಮೊದಲ ಇಡಿ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿನ ಮೇಲೆ ಹೊರಗಿದ್ದಾರೆ.