ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ ಕೆ.ಎಸ್ ಈಶ್ವರಪ್ಪ ಅವರು ಘೋಷಣೆ ಮಾಡಿದ್ದು, ಶಿವಮೊಗ್ಗ ಡಿಸಿ ಕಚೇರಿವರೆಗೆ ಮರವಣಿಗೆ, ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು. ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು, ಬೆಂಬಲಿಗರು ಸಾಥ್ ನೀಡಲಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಖಚಿತ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ನಾಳೆ ಶಿವಮೊಗ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಯಾವುದೇ ಸ್ಟಾರ್ ಪ್ರಚಾರಕರಿಲ್ಲ, ಜನಸಾಮಾನ್ಯರೇ ನನಗೆ ಸ್ಟಾರ್ ಪ್ರಚಾರಕರು. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.