ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಲ್ಲಿ ಕೆಲಸದ ಆಮಿಷವೊಡ್ಡಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಬರೋಬ್ಬರಿ 15 ಕೋಟಿ ರೂಪಾಯಿ ದೋಚಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಬೆಂಗಳೂರಿನ ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ಮೂಲದ ಮಂಜುನಾಥ್, ಅನೀಲ್ ಬಂಧಿತ ಆರೋಪಿಗಳು. ಮಂಜುನಾಥ್ ಈ ಹಿಂದೆ ಕೆ.ಎಸ್.ಆರ್.ಟಿ.ಸಿಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಬ್ಯಾಡ್ ಬಿಹೇವಿಯರ್ ನಿಂದಾಗಿ ಆತನನ್ನು ಕೆಲಸದಿಂದ ವಜಾ ಮಾಡಲಾಗಿತ್ತು.
ಬಿಪಿಎಲ್, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ರೇಷನ್
ಕೆಲಸದಿಂದ ವಜಾಗೊಂಡಿದ್ದ ಮಂಜುನಾಥ್, ಅನೀಲ್ ಎಂಬಾತನೊಂದಿಗೆ ಸೇರಿ ಸರಣಿ ವಂಚನೆ ಕೃತ್ಯಗಳನ್ನು ನಡೆಸುತ್ತಿದ್ದ. ಬಳ್ಳಾರಿ, ಗದಗ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆಗಳಲ್ಲಿ ಜನರಿಗೆ ಕೆ.ಎಸ್.ಆರ್.ಟಿ.ಸಿಯಲ್ಲಿ ಬಸ್ ನಿರ್ವಾಹಕ, ಚಾಲಕ, ಆಫೀಸ್ ಕೆಲಸ ಸೇರಿದಂತೆ ವಿವಿಧ ಹುದ್ದೆಗಳ ಆಫರ್ ನೀಡಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದರು. ಇದೀಗ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.