alex Certify BIG NEWS: KSRTC ಬಸ್ ಡಿಕ್ಕಿ; BBMP ನೌಕರನ ಸ್ಥಿತಿ ಗಂಭಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್ ಡಿಕ್ಕಿ; BBMP ನೌಕರನ ಸ್ಥಿತಿ ಗಂಭಿರ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದಿದೆ.

ಬೈಕ್ ಸವಾರ ವಿ.ಶ್ರೀಧರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶ್ರೀಧರ್ ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳು ಶ್ರೀಧರ್ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು-ತಿರುಪತಿ ಮಾರ್ಗದ ಕೋಲಾರ ಡಿಪೋಗೆ ಸೇರಿದ ಕೆ ಎಸ್ ಆರ್ ಟಿ ಸಿ ಬಸ್ ಶ್ರೀಧರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಹಲಸೂರು ಗೇಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...