ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 11 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಹೊಸಪೇಟೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ 11 ಪ್ರಯಾಣಿಕರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.