alex Certify BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡಿದೆ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಯಾವ ಚಿಂತೆಯೂ ಇಲ್ಲ, ಕೇಂದ್ರ ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಿದ್ದಾರೆ ಯಾವ ನೈತಿಕತೆ ಇವರಿಗಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕಿಡಿಕಾರಿದ ಬೊಮ್ಮಾಯಿ, ಕೆ.ಎಸ್.ಆರ್.ಟಿ.ಸಿ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಡೀಸೆಲ್ ಇಲ್ಲದೇ ಬಸ್ ಗಳು ನಿಲ್ಲುವ ಪರಿಸ್ಥಿತಿ ಇದೆ. ಇನ್ನು ಇಡೀ ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ನಿಜ ಬಣ್ಣ ಬಯಲಾಗಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...