ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲ 2023 – 24ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 146.01 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಈ ಮೂಲಕ ಸತತ 13ನೇ ವರ್ಷವೂ ಆದಾಯ ಗಳಿಕೆಯಲ್ಲಿ ರಾಜ್ಯದ ಮೊದಲ ದೇಗುಲವಾಗಿ ಹೊರಹೊಮ್ಮಿದೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕಳೆದ ಹಣಕಾಸು ವರ್ಷದಲ್ಲಿ 123 ಕೋಟಿ ರೂಪಾಯಿ ಆದಾಯ ಬಂದಿದ್ದು, ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ಸ್ತ್ರೀ ಶಕ್ತಿ ಯೋಜನೆ ಜಾರಿಗೆ ತಂದ ಬಳಿಕ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಕುಕ್ಯೆ ಸುಬ್ರಹ್ಮಣ್ಯವೂ ಸೇರಿದಂತೆ ರಾಜ್ಯದ ಹಲವು ದೇಗುಲಗುಳ ಆದಾಯ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
ಇನ್ನುಳಿದಂತೆ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ 68.23 ಕೋಟಿ ರೂಪಾಯಿ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ 30.73 ಕೋಟಿ ರೂಪಾಯಿ, ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 25.80 ಕೋಟಿ ರೂಪಾಯಿ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 15.27 ಕೋಟಿ ರೂಪಾಯಿ, ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ 16.29 ಕೋಟಿ ರೂಪಾಯಿ, ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ 13.65 ಕೋಟಿ ರೂಪಾಯಿ ಹಾಗೂ ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ 11.37 ಕೋಟಿ ರೂಪಾಯಿ ಆದಾಯ ಲಭಿಸಿದೆ.