ಬೆಳಗಾವಿ : ಹಿಮೋಫಿಲಿಯಾ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಹಾಗೂ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವರು, ಹಿಮೋಫಿಲಿಯಾ ರೋಗ ಪತ್ತೆಹಚ್ಚಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಹಾಗೂ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹಿಮೋಫಿಲಿಯಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಇದಕ್ಕಾಗಿ ಸುಮಾರು 30 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತಿದೆ. ಕರ್ನಾಟಕದಲ್ಲಿನ ಹಿಮೋಫಿಲಿಯಾ ಚಿಕಿತ್ಸೆ ವ್ಯವಸ್ಥೆಯು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.