ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುಡ್ ಬೈ ಹೇಳಿದ್ದು, ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದ್ದು, ಬಿಜೆಪಿ ನಾಯಕರು ಲಕ್ಷ್ಮಣ್ ಸವದಿಯನ್ನು ಸಂಪರ್ಕಿಸಿ ಬಿಜೆಪಿಗೆ ಬರುವಂತೆ ಮನವೊಲಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜಗದೀಶ್ ಶೆಟ್ಟರ್ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.