alex Certify BIG NEWS : ವಿಧಾನ ಪರಿಷತ್‌ ನಲ್ಲೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ವಿಧಾನ ಪರಿಷತ್‌ ನಲ್ಲೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು.

ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಕೋರಿದರು.

2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. 2023ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಪರ್ಯಾಯಲೋಚಿಸಲು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕೋರಿದರು. ಅದೇ ರೀತಿ 2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023ನ್ನು ಪರ್ಯಾಯಲೋಚಿಸಲು ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಅವರು ಕೋರಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ವಿಧೇಯಕಗಳ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದರು. ಸಚಿವರು, ವಿಧೇಯಕಗಳನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಯವರು ಈ ವಿಧೇಯಕಗಳ ಅಂಗೀಕಾರಕ್ಕೆ ವಿಧಾನ ಪರಿಷತ್‌ನಿಂದ ಅನುಮೋದನೆ ದೊರೆತಿದೆ ಎಂದು ಘೋಷಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...