ಚಿತ್ರದುರ್ಗ : ಪ್ರಸಕ್ತ ವರ್ಷದಲ್ಲಿ ರಾಜ್ಯಾದ್ಯಂತ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಬರುವ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿಯಿಂದ ಶಿಕ್ಷಣ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಶಾಲೆಗಳೂ ತುಂಬಾ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪಬ್ಲಿಕ್ ಶಾಲೆಗಳಲ್ಲಿ ಮಕ್ಕಳು 1 ರಿಂದ 12 ನೇ ತರಗತಿವರೆಗೆ ಸಂಪೂರ್ಣ ಉಚಿತ ಶಿಕ್ಷಣ ಪಡೆದು ಹೊರಬರುತ್ತಾರೆ. ಬರುವ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿಯಿಂದ ಶಿಕ್ಷಣ ನೀಡಲಾಗುವುದು ಎಂದು ಹೇಳಿದ್ದಾರೆ.