ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನ ಸಹಕಾರ ನೀಡದಿದ್ದರೆ, ಕೋವಿಡ್ ಪ್ರಕರಣಗಳು ಹೆಚ್ಚಿದರೆ ಲಾಕ್ ಡೌನ್ ಕ್ರಮ ಅನಿವಾರ್ಯವಾಗುತ್ತದೆ ಎಂದರು.
ಬೆಚ್ಚಿಬೀಳಿಸುವಂತಿದೆ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ
ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅರಗ ಜ್ಞಾನೇಂದ್ರ, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಚಾರ. ಆದರೆ ಕೋವಿಡ್ ನಂತಹ ಸಂದರ್ಭದಲ್ಲಿ ರಾಜಕಾರಣದ ನಡೆ ಸರಿಯಲ್ಲ. ವಿಪಕ್ಷವಾಗಿ ಕಾಂಗ್ರೆಸ್ ಹೋರಾಟ ನಡೆಸಲಿ. ಆದರೆ ಇಂತಹ ಸಂದರ್ಭದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗಾಗಿ ಏನೂ ಮಾಡಿಲ್ಲ. ಈಗ ರಾಜಕಾರಣಕ್ಕಾಗಿ ಪಾದಯಾತ್ರೆ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.