ಲಕ್ನೋ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2002 ರಿಂದ ಹಲವಾರು ಬಾರಿ ಪ್ರತಿನಿಧಿಸಿರುವ ಅಮೇಥಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡರೊಬ್ಬರು ಬುಧವಾರ ಹೇಳಿದ್ದಾರೆ.
ದೆಹಲಿಯಲ್ಲಿ ಸಭೆ ಮುಗಿಸಿ ಹಿಂದಿರುಗಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಘಾಲ್, ರಾಹುಲ್ ಗಾಂಧಿ ಅಮೇಥಿಯಿಂದ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಮತ್ತು ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಿದರು.ಈ ವಿಷಯದ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವದಿಂದ ಯಾವುದೇ ಹೇಳಿಕೆ ಬಂದಿಲ್ಲ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇನ್ನೂ ನಡೆದಿಲ್ಲ.ರಾಹುಲ್ ಗಾಂಧಿ 2002 ರಿಂದ 2019 ರವರೆಗೆ ಸಂಸತ್ತಿನಲ್ಲಿ ಅಮೇಥಿಯನ್ನು ಪ್ರತಿನಿಧಿಸಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತರು. ಅವರು ಈಗ ಕೇರಳದ ವಯನಾಡ್ ನ ಸಂಸದರಾಗಿದ್ದಾರೆ.