ಬೆಳಗಾವಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಎಂಇಎಸ್, ಶಿವಸೇನೆ ಪುಂಡಾಟದ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕುಂದಾನಗರಿಯಲ್ಲಿ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಕರವೆ ನಡಿಗೆ ಬೆಳಗಾವಿ ಕಡೆಗೆ ಎಂಬ ಘೋಷವಾಕ್ಯದೊಂದಿದೆ ಬೆಳಗಾವಿ ತಲುಪಿರುವ ಹೋರಾಟಗಾರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪ್ರತಿಭಟನಾ ಮೆರವಣಿಗೆ ಮೂಲಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಎಂಇಎಸ್ ಹಾಗೂ ಶಿವಸೇನೆ ಪುಂಡರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿದ್ದಾರೆ. ಬೆಳಗಾವಿಯಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕನ್ನಡಪರ ಸಂಘಟನೆಗಳು ಕನ್ನಡ ಬಾವುಟ ಹಿಡಿದು ಸುವರ್ಣಸೌಧದತ್ತ ಧಾವಿಸಿದ್ದಾರೆ.
ಸರ್ನೇಮ್ ಆಯ್ಕೆ ಮಾಡಿಕೊಳ್ಳಲು ಮಕ್ಕಳಿಗೆ ಸಿಗ್ತಿದೆ ಸಂಪೂರ್ಣ ಸ್ವಾತಂತ್ರ
ಬೆಳಗಾವಿ ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 3000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆಗೆ ಯಾವುದೇ ಅವಕಾಶವಿಲ್ಲ. ಹಾಗಾಗಿ ಪ್ರತಿಭಟನಾಕಾರರನ್ನು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿಯೇ ತಡೆದು ಮನವೊಲಿಸುವ ಯತ್ನ ನಡೆಸಲಾಗುತ್ತಿದೆ ಎಂದು ಬೆಳಗಾವಿ ಡಿಸಿಪಿ ವಿಕ್ರಮ್ ಆಮಟೆ ತಿಳಿಸಿದ್ದಾರೆ.