ಬೆಳಗಾವಿ: ವಿವಾದಾತ್ಮಕ ನಕ್ಷೆ ಶೇರ್ ಮಾಡಿದ್ದ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಬೆಳಗಾವಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಶುಭಂ ಶೆಳಕೆ ವಿವಾದಾತ್ಮಕ ನಕ್ಷೆ ಹಾಗೂ ವಿಡಿಯೋ ಶೇರ್ ಮಾಡಿದ್ದರು. ಈ ಬಗ್ಗೆ ಕರವೇ ಕಾರ್ಯಕರ್ತ ವಿನಾಯಕ ಬೋವಿ ದೂರು ನೀಡಿದ್ದರು. ಪೋಸ್ಟ್ ಡಿಲಿಟ್ ಮಾಡುವಂತೆ ಮಾಳಮಾರುತಿ ಠಾಣೆ ಪೊಲೀಸರು ಶುಭಂ ಶೆಳಕೆಯನ್ನು ಠಾಣೆಗೆ ಕರೆಸಿ ವಾರ್ನಿಂಗ್ ಮಾಡಿದ್ದರು.
ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಉದ್ಧಟತನ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಮಾಳಮಾರುತಿ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.