ಬೆಂಗಳೂರು : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಸಚಿವರು ಮಾತನಾಡಿದ್ದು, ಕೊಲೆ ಪ್ರಕರಣದ ತನಿಖೆ ನಡೆಸುವಲ್ಲಿ ಪೊಲೀಸರು ಆ್ಯಕ್ಟಿವ್ ಆಗಿದ್ದಾರೆ. ಕೊಲೆ ಸಂಬಂಧ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಕೊಲೆಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದರು.
ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದರು. ಈಗಲೇ ಎಲ್ಲವನ್ನೂ ಬಹಿರಂಗ ಪಡಿಸೋಕೆ ಆಗಲ್ಲ, ತನಿಖೆ ಬಳಿಕ ಎಲ್ಲವೂ ಹೊರಗೆ ಬರಲಿದೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ (45) ಅವರನ್ನು ದುಷ್ಕರ್ಮಿಗಳು ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.