ಬೆಂಗಳೂರಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಜನರ ಆಕ್ರೋಶ ಭುಗಿಲೆದ್ದಿದೆ.
ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಎಸ್ಕೇಪ್ ಆಗಿದ್ದಾರೆ. ನೋವಿನಿಂದ ಮೂಕ ಪ್ರಾಣಿಗಳು ನರಳಾಡಿದ್ದನ್ನು ಜನರು ಕಂಬನಿ ಮಿಡಿದಿದ್ದಾರೆ. ಚಾಕುವಿನಿಂದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಕ್ರಮಣದ ಸಂದರ್ಭದಲ್ಲಿ ಹಸುಗಳನ್ನು, ಗೋವುಗಳನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಹಸುವನ್ನು ಗೋಮಾತೆ ಎಂದು ಪೂಜಿಸುತ್ತೇವೆ. ಆದರೆ ಹಸುಗಳ ಮೇಲೆ ಇಂದು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ ಕೆಚ್ಚಲನ್ನು ಕೊಯ್ದಿದ್ದಾರೆ, ಕಾಲುಗಳಿಗೂ ಗಾಯ ಮಾಡಿದ್ದಾರೆ. ಹಿಂದುಗಳಿಗೆ ಯಾವ ಸಂದೇಶ ನೀಡಲು ಹೊರಟಿದ್ದಾರೆ ಇವರು? ಸರ್ಕಾರ ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಕರಾಳ ಸಂಕ್ರಾಂತಿಗೆ ಕರೆ ಕೊಡಬೇಕಾಗುತ್ತದೆ ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.