ಮಂಗಳೂರು : ಐಸ್ಕ್ರೀಂ ಘಟಕದ ಎಳನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಸ್ಥರು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸ್ಕ್ರೀಂ ಘಟಕದ ಎಳನೀರು ಸೇವಿಸಿದ ಪರಿಣಾಮ ಹಲವರು ಅಸ್ವಸ್ಥಗೊಂಡಿದ್ದಾರೆ.