
ಮೈಸೂರು : ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ.
ಮೈಸೂರು ದಸರಾ ಮಹೋತ್ಸವ ಸಂಬಂಧ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸಭೆ ನಡೆಸಿದ್ದು, ಅಕ್ಟೋಬರ್ 15 ರಂದು ದಸರಾ ಉದ್ಘಾಟನೆಗೊಳ್ಳಲಿದ್ದು, ಅಕ್ಟೋಬರ್ 24 ರಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದ್ದಾರೆ.
ವಿಧಾನಸಭೆ ಅಧಿವೇಶನ ಮುಗಿದ ಬಳಿಕ ದಸರಾ ಉನ್ನತ ಮಟ್ಟದ ಸಮಿತಿ ಮತ್ತೊಂದು ಸಭೆ ನಡೆಸುವ ಸಾಧ್ಯತೆ ಇದ್ದು, ದಸರಾ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.