ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4 ರೂ ಹೆಚ್ಚಳವಾಗಿದ್ದು, ಹಾಲಿದ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇದರಲ್ಲಿ ಸರ್ಕಾರ ಅಥವಾ ಕೆಎಂಎಫ್ ಸಂಸ್ಥೆಗೆ ಲಾಭ ಗಳಿಕೆ ಮಾಡಿಕೊಡುವ ಯಾವುದೇ ಉದ್ದೇಶವಿಲ್ಲ. ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ. ನಾಡಿನ ಲಕ್ಷಾಂತರ ಹೈನುಗಾರರ ಬದುಕಿಗೆ ಬಲ ತುಂಬುವ ಏಕೈಕ ಉದ್ದೇಶದ ಈ ಪ್ರಯತ್ನಕ್ಕೆ ಸಾರ್ವಜನಿಕರು ಬೆಂಬಲವಾಗಿ ನಿಲ್ಲುತ್ತೀರೆಂಬ ವಿಶ್ವಾಸ ನಮಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇದರಲ್ಲಿ ಸರ್ಕಾರ ಅಥವಾ ಕೆಎಂಎಫ್ ಸಂಸ್ಥೆಗೆ ಲಾಭ ಗಳಿಕೆ ಮಾಡಿಕೊಡುವ ಯಾವುದೇ ಉದ್ದೇಶವಿಲ್ಲ. ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ… pic.twitter.com/CI7fLWQQGv
— Siddaramaiah (@siddaramaiah) March 27, 2025
ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ. ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಲಕ್ಷಾಂತರ ಹೈನುಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಹಾಗೂ ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ಪ್ರಸ್ತುತ ದರ ಏರಿಕೆ ನಿರ್ಧಾರವನ್ನು ನಮ್ಮ ಸರ್ಕಾರವು ಕೈಗೊಂಡಿದೆ. ರಾಷ್ಟ್ರದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಅತ್ಯಂತ ಕಡಿಮೆಯಿದೆ. ರಾಜಧಾನಿ ಸೇರಿದಂತೆ ಪ್ರಮುಖ ರಾಜ್ಯಗಳ ಹಾಲಿನ ದರ ಪಟ್ಟಿ ಈ ಕೆಳಗಿನಂತಿದೆ.
ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ.
ಶುದ್ಧ ಹಾಗೂ… pic.twitter.com/S5QOW6hw4M
— Siddaramaiah (@siddaramaiah) March 27, 2025