![](https://kannadadunia.com/wp-content/uploads/2021/01/vidhana-soudha-750-1-jpg.jpg)
ಬೆಂಗಳೂರು : ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷವೂ ರಾಜ್ಯ ಮಟ್ಟದಲ್ಲಿ ಜನವರಿ 25, 2024 ರಂದು 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು (Nothing Like Voting, 1 Vote for Sure) ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧೈಯವಾಕ್ಯದೊಂದಿಗೆ ಆಯೋಜಿಸಲಾಗಿದೆ.
ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿಯನ್ನು ಜನವರಿ 25, 2024 ರಂದು ಬೆಳಿಗ್ಗೆ 11.30 ಘಂಟೆಗೆ ಕೇಂದ್ರ ಚುನಾವಣಾ ಆಯೋಗವು ಸಿದ್ಧಪಡಿಸಿರುವ “Voter’s Pledge” ಪ್ರತಿಯಂತೆ ಸರ್ಕಾರದ ಎಲ್ಲಾ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲುವಂತೆ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ಸರ್ಕಾರಿ ಕಛೇರಿ ಹಾಗೂ ಆಧೀನ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಬೇಕು. ಈ ಕುರಿತು ಆಗತ್ಯ ಕ್ರಮ ಕೈಗೊಂಡ ವರದಿಯನ್ನು, ಫೋಟೋ ಸಹಿತ ಜಿಲ್ಲಾ ಸ್ಟೀಫ್ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಲಯದ ಇ-ಮೇಲ್ ವಿಳಾಸಕ್ಕೆ ಕಡ್ಡಾಯವಾಗಿ ಆಯಾ ಕಚೇರಿ ಮುಖ್ಯಸ್ಥರು ಕಳಿಸುವಂತೆ ಸೂಚನೆ ನೀಡಲಾಗಿದೆ.
ಮತದಾರರ ಪ್ರತಿಜ್ಞಾ ವಿಧಿ
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾμÉ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆಯನ್ನು ಸ್ವೀಕರಿಸುತ್ತೇವೆ.