alex Certify BIG NEWS : ಬೆಂಗಳೂರಿನ ಪಿಜಿಗಳಿಗೆ ‘BBMP’ ಯಿಂದ ಹೊಸ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಿನ ಪಿಜಿಗಳಿಗೆ ‘BBMP’ ಯಿಂದ ಹೊಸ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ) ಉದ್ಯಮಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ) ಉದ್ಯಮಕ್ಕೆ ಪರವಾನಗಿ ನೀಡುವ ಹೊಸ ಮಾರ್ಗಸೂಚಿಯನ್ನು ಬಿಬಿಎಂಪಿ ಪ್ರಕಟಿಸಿದೆ. ವಲಯ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿ ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಪಿ.ಜಿ.ಗಳಿಗೆ 6 ತಿಂಗಳಿಗೊಮ್ಮೆ ಭೇಟಿ ನೀಡಿ ಮಾರ್ಗಸೂಚಿಗಳು ಪಾಲನೆಯಾಗುತ್ತಿವೆಯೇ ಎಂಬುದನ್ನು ಪರಿಶೀಲಿಸುವ ಜವಾಬ್ದಾರಿಯನ್ನು ವಹಿಸಿದೆ.

ಏನಿದೆ ಮಾರ್ಗಸೂಚಿಯಲ್ಲಿ..?

ಮಾರ್ಗಸೂಚಿಗಳೇನು?
• ಪಿ.ಜಿ.ಗಳ ಪ್ರವೇಶ/ ನಿರ್ಗಮ ದ್ವಾರ ಮತ್ತು ಆವರಣದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. 90 ದಿನಗಳವರೆಗೆ ಬ್ಯಾಕ್ಅಪ್ ಹೊಂದಿರಬೇಕು.
• ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿ.ಜಿ.ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ 70 ಚದರ ಅಡಿ ಕನಿಷ್ಠ ಜಾಗವಿರಬೇಕು. ಕಟ್ಟಡದಲ್ಲಿ ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸ೦ಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿ ನೀಡಬೇಕು.
• ಪಿ.ಜಿ.ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೌಲಭ್ಯವಿರಬೇಕು.
• ಪಿ.ಜಿ.ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು. ಪ್ರತಿಯೊಬ್ಬ ವಾಸಿಗೆ ಪ್ರತಿ ದಿನ 135 ಲೀಟರ್ ನೀರಿನ ಲಭ್ಯತೆ ಇರುವುದನ್ನು ಮಾಲೀಕರು / ಉದ್ದಿಮೆದಾರರು ಖಾತರಿಪಡಿಸಬೇಕು.
• ಪಿ.ಜಿ.ಗಳಲ್ಲಿ ಉದ್ದಿಮೆದಾರರು ತಮ್ಮದೇ ಅಡುಗೆ ಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ ಮೂರು ತಿಂಗಳೊಳಗೆ ಕಡ್ಡಾಯವಾಗಿ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಳ್ಳಬೇಕು.
• ಪಿ.ಜಿ. ನಿವಾಸಿಗಳ ಸುರಕ್ಷತೆಗೆ ಕನಿಷ್ಠ ಒಬ್ಬ ಸಿಬ್ಬಂದಿಯನ್ನು 24 ಗಂಟೆಯೂ ನಿಯೋಜಿಸಿರಬೇಕು.
• ಪಿ.ಜಿ.ಗಳು ವಾಣಿಜ್ಯ ಪರವಾನಗಿ ಪತ್ರ ಪಡೆಯುವಾಗ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ
ಬಗ್ಗೆ ಸಕ್ಷಮ ಪ್ರಾಧಿಕಾರದ ಅಧಿಕೃತ ಪ್ರಮಾಣ ಪತ್ರ ಸಲ್ಲಿಸಬೇಕು.
• ಪಿ.ಜಿ. ಕಟ್ಟಡದಲ್ಲಿ ಬಿಬಿಎಂಪಿ ಸಹಾಯವಾಣಿ 1533, ಪೊಲೀಸ್ ಇಲಾಖೆಯ ಸಹಾಯವಾಣಿ 101 ಫಲಕವನ್ನು ಪ್ರದರ್ಶಿಸಬೇಕು.
ಪಿ.ಜಿ.ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಅಳವಡಿಸಿರಬೇಕು.
• ಪಿ.ಜಿ.ಗಳ ಮಾಲೀಕರು ಘನತ್ಯಾಜ್ಯ ವಿಂಗಡಿಸಿ, ವಿಲೇವಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...