alex Certify BIG NEWS: NIA ತನಿಖೆ ನಡೆಸುತ್ತಿರುವ ಪ್ರಕರಣ ಹೇಗೆ ಹಿಂಪಡೆಯುತ್ತಾರೆ ? ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: NIA ತನಿಖೆ ನಡೆಸುತ್ತಿರುವ ಪ್ರಕರಣ ಹೇಗೆ ಹಿಂಪಡೆಯುತ್ತಾರೆ ? ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ


ಬೆಂಗಳೂರು: ಗಲಭೆ ಹಾಗೂ ಪ್ರತಿಭಟನೆ ನಡೆಸಿದ ಆರೋಪಿಗಳ ವಿರುದ್ಧದ ಪ್ರಕರಣ ವಾಪಸ್ ಪಡೆಯುವಂತೆ ಶಾಸಕ ತನ್ವೀರ್ ಸೇಠ್ ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಸ್ಪಂದಿಸಿರುವುದು ಜನರಿಗೆ ಮಾಡುತ್ತಿರುವ ದ್ರೋಹ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ದಂಗೆ ಎದ್ದವರಿಗೆ ಸರ್ಕಾರ ರಕ್ಷಣೆಗೆ ಮುಂದಾಗಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹ. ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆ ಮಾಡುವುದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಗಂಭೀರ ಪ್ರಕರಣ. ಈ ಪ್ರಕರಣದಲ್ಲಿ ಪೊಲೀಸ್ ಠಾಣೆ, ಪೊಲೀಸ್ ವಾಹನಗಳು ಕಾಂಗ್ರೆಸ್ ಶಾಸಕನ ಮನೆ ಸುಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ವಿರುದ್ದದ ದಂಗೆಯಾಗಿದೆ. ಇಂತವರ ವಿರುದ್ದದ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನ ಮಾಡಿದ್ದಾರೆ ಎಂದರೆ ಅಪರಾಧಿಗಳಿಗೆ ರಕ್ಷಣೆ ದೊರೆಯುತ್ತದೆ ಎಂದು ಇನ್ನಷ್ಟು ಧೈರ್ಯ ಬರುತ್ತದೆ. ದಂಗೆ ಎದ್ದವರಿಗೆ ಆಶ್ರಯ ನೀಡಿದಂತಾಗುತ್ತದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣವನ್ನು ಎನ್ ಐ ಎ ತೆಗೆದುಕೊಂಡಿದೆ. ಇದರಲ್ಲಿ ಪಿಎಫ್ಐ, ಎಸ್ ಡಿ ಪಿ ಐ ಕೈವಾಡ ಇದೆ ಅಂತ ಬಹಳ ಸ್ಪಷ್ಟವಾದ ಪುರಾವೆಗಳಿವೆ. ತನಿಖೆ ನಡೆಸಿ ಚಾರ್ಜ್ ಶೀಟ್ ಆಗಿದೆ. ಎನ್ಐಎ ತನಿಖೆ ನಡೆಸುತ್ತಿರುವ ಪ್ರಕರಣವನ್ನು ಇವರು ಹೇಗೆ ವಾಪಸ್ ಪಡೆಯುತ್ತಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಗೂ ಕೆಲವು ಸಂಘಟನೆಗಳು ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ಇದೆ. ಈ ವಿಚಾರದಲ್ಲಿ ಸಿಎಂ ಸ್ಪಷ್ಟ ನಿಲುವಿಗೆ ಬರಬೇಕು. ದೇಶದ್ರೋಹಿ ಪ್ರಕರಣದಲ್ಲಿರುವ ವ್ಯಕ್ತಿಗಳಿಗೆ ಶಿಕ್ಷೆ ಕೊಡುತ್ತೀರಾ ಅಥವಾ ಪ್ರಕರಣ ವಾಪಸ್ ತೆಗೆದುಕೊಳ್ಳುತ್ತೀರಾ? ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...