ತಿರುವನಂತಪುರಂ: ಎನ್ ಐಎ ದಾಳಿ ಖಂಡಿಸಿ ಕೇರಳದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪಿ ಎಫ್ ಐ ಸಂಘಟನೆ ಕಾರ್ಯಕರ್ತರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳದ ಕೊಲ್ಲಂನಲ್ಲಿ ಪಿಎಫ್ ಐ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಬಸ್ ಗಳ ಮೇಲೆ, ಸಿಕ್ಕಸಿಕ್ಕ ವಾಹನಗಳ ಮೇಲೆ ಪಿ ಎಫ್ ಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಝಿಕ್ಕೋಡ್, ಕೊಚ್ಚಿ, ಆಲಪ್ಪುಳ, ಕೊಲ್ಲಂ ಹಾಗೂ ವಯನಾಡಿನಲ್ಲಿ ಪಿ ಎಫ್ ಐ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಕೆ ಎಸ್ ಆರ‍್ ಟಿ ಸಿ ಬಸ್, ಲಾರಿ ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಕೂಡ ಗಾಯಗೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಭದ್ರತೆ ಕೈಗೊಳ್ಳಲಾಗಿದೆ.