alex Certify BIG NEWS : ‘ಮಾನಸಿಕ ಸ್ವಾಸ್ಥ್ಯ’ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮಾನಸಿಕ ಸ್ವಾಸ್ಥ್ಯ’ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮಾನಸಿಕ ಆರೋಗ್ಯದೆಡೆಗೆ ಕರ್ನಾಟಕದ ನಡೆಯು ಆರೋಗ್ಯ ಸೇವೆಯ ಲಭ್ಯತೆ, ನಾವಿನ್ಯತೆ ಮತ್ತು ಸಹಾನುಭೂತಿಯನ್ನೊಳಗೊಂಡ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾನಸಿಕ ಆರೋಗ್ಯದ ಸವಾಲುಗಳನ್ನು ಸಮಗ್ರವಾಗಿ ಎದುರಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಮುಂಚೂಣಿಯಲ್ಲಿರಿಸಿದೆ. ಈ ಪ್ರಯತ್ನ ಒಳಗೊಳ್ಳುವ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ. ಈ ಮೈಲಿಗಲ್ಲು ಸಾಧನೆಗೆ ಕಾರಣರಾಗಿರುವ ನಿಮ್ಹಾನ್ಸ್ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ನನ್ನ ಅಭಿನಂದನೆಗಳು. ನಿಮ್ಮ ಸಮರ್ಪಣೆಯ ಸೇವೆ ಮಾನಸಿಕ ಆರೋಗ್ಯ ವಿಶ್ವದೆಲ್ಲೆಡೆ ಲಭಿಸಲು ಹಾಗೂ ಪ್ರತಿಯೊಬ್ಬರಿಗೂ ಆರೋಗ್ಯಕರ ಜೀವನದ ಅವಕಾಶ ಕಲ್ಪಿಸುವ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ನಿಮ್ಹಾನ್ಸ್ನ ಮೂಲಸೌಕರ್ಯ ಅಭಿವೃದ್ಧಿ, ಸಂಶೋಧನೆ ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ನಾವು ಒಟ್ಟಾಗಿ ಶ್ರಮಿಸಿ, ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವ ಮೂಲಕ ಸುಭದ್ರ ರಾಷ್ಟ್ರವನ್ನು ನಿರ್ಮಿಸೋಣ.

ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ. ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ. ನಮ್ಮ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ಗಳಲ್ಲಿ ಈ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...