alex Certify Loka Sabha Election ; ಮತದಾನ ನಡೆಯುವ ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Loka Sabha Election ; ಮತದಾನ ನಡೆಯುವ ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು 14:26:04:20240 ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ.
ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರಜೆ ನೀಡಲಾಗಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...