ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಬಾರಿ ಪತ್ರ ಬರೆದು ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿದೆ. ಈ ಹಿನ್ನೆಲೆ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ಅವರ ಬಂಧನ ಖಚಿತವಾಗಿದೆ.
ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂತ ಇಲಾಖೆಯು ಪ್ರಜ್ವಲ್ ರೇವಣ್ ಅವರ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್ ಪೋರ್ಟ್ ರದ್ದಾದ್ರೆ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕು. ಪ್ರಜ್ವಲ್ ಯಾವ ದೇಶದಲ್ಲಿ ಇದ್ದಾರೋ ಅಲ್ಲಿ ಅವರನ್ನು ಹಸ್ತಾಂತರ, ಗಡಿಪಾರು ಅಡಿ ಪ್ರಕ್ರಿಯೆ ಅಡಿ ಭಾರತಕ್ಕೆ ಕರೆತರಬಹುದು.