ಹುಬ್ಬಳ್ಳಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪೇಸಿಎಂ ಅಭಿಯಾನ ನಡೆಸಿದ್ದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ಪೇಮೇಯರ್ ಅಭಿಯಾನ ಆರಂಭವಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಕಾಂಗ್ರೆಸ್ ನಾಯಕರು ಪೇ ಮೇಯರ್ ಪೋಸ್ಟರ್ ಅಭಿಯಾನ ಆರಂಭಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಿನಲ್ಲಿ ಸುಮಾರು 1.5 ಕೋಟಿ ದುಂದುವೆಚ್ಚ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಮಾಡಲಾಗುತ್ತಿದೆ. ಪೆಂಡಾಲ್ ಹಾಕಿದವರಿಂದಲೂ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು PayMayor ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.