ಬೆಂಗಳೂರು: ಪಿಸಿ ನೇಮಕ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಪ್ರಕರಣವನ್ನು ಗೃಹ ಇಲಾಖೆ ಸಿಐಡಿಗೆ ಹಸ್ತಾಂತರಿಸಿ ಆದೇಶ ನೀಡಿದೆ.
ಅಕ್ಟೋಬರ್ 24ರಂದು ಬೆಳಗಾವಿಯಲ್ಲಿ ನಡೆದಿದ್ದ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲಿಗೆ ಪ್ರಯತ್ನಿಸಲಾಗಿತ್ತು. ರಾಮತೀರ್ಥ ನಗರದಲ್ಲಿ ಪರೀಕ್ಷಾ ಕೇಂದ್ರದ ಮೇಲೆ ದಾಳಿ ನಡೆಸಿದ್ದ ಬೆಳಗಾವಿ ಪೊಲೀಸರು 12 ಜನರನ್ನು ಬಂಧಿಸಿದ್ದರು. 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದರಲ್ಲದೇ ಇಬ್ಬರು ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದಿದ್ದರು.
ʼಆಧಾರ್ʼ ನಿಯಮ ಉಲ್ಲಂಘಿಸುವವರ ವಿರುದ್ದ UIDAI ಕ್ರಮಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್
ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಗೃಹ ಇಲಾಖೆ ಪಿಸಿ ಪರೀಕ್ಷೆ ನಕಲು ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳ ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡುವಂತೆ ಗೃಹ ಇಲಾಖೆ ಬೆಳಗಾವಿ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.