ಶಿವಮೊಗ್ಗ: ಉಗ್ರರ ಪರ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ನಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆ ಹಾಗೂ ಶಂಕಿತ ಉಗ್ರರ ಪರ ಬ್ಯಾಟ್ ಬೀಸಿದ್ದ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಈಶ್ವರಪ್ಪ, ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಕಾಂಗ್ರೆಸ್ ನವರಿಗೆ ಸಮಾಧಾನವಾಗುತ್ತಿಲ್ಲ. ಉಗ್ರರ ಪರವಾದ ಧೋರಣೆಗಳನ್ನು ಹೊಂದಿದ್ದಾರೆ. ಮುಂದೆ ಪಿ ಎಫ್ ಐ ನಂತೆ ಕಾಂಗ್ರೆಸ್ ನ್ನೂ ಬ್ಯಾನ್ ಮಡಬೇಕಾದ ಸ್ಥಿತಿ ಬರಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿದವನು ಭಯೋತ್ಪಾದಕ ಅಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿಲ್ಲ. ಡಿಕೆಶಿ ಸಿದ್ದರಾಮಯ್ಯ ಮೈಯಲ್ಲಿ ಭುಟ್ಟೋ, ಜಿನ್ನಾ ರಕ್ತ ಹರಿಯುತ್ತಿದೆ. ಡಿಕೆಶಿಯವರ ಹೇಳಿಕೆಯನ್ನು ಕಾಂಗ್ರೆಸ್ ನವರು ಖಂಡಿಸುವ ಕೆಲಸ ಮಾಡಿಲ್ಲ. ಖರ್ಗೆಯವರಿಗೆ ಆಗ್ರಹಿಸುತ್ತಿದ್ದೇನೆ ಮೊದಲು ಡಿಕೆಶಿ, ನಲಪಾಡ್ ಅವರನ್ನು ಪಕ್ಷದಿಂದ ಹೊರಹಾಕಿ ಎಂದು ಕಿಡಿಕಾರಿದರು.