ಬೆಂಗಳೂರು: ದೇಶಾದ್ಯಂತ ಎನ್ ಐ ಎ ದಾಳಿ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ ನಿಷೇಧ ಮಾಡುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಪಿಎಫ್ ಐ, ಎಸ್ ಡಿಪಿಐ ಸಂಘಟನೆ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು ಎಂದು ಹೇಳಿದರು.
ಇನ್ನು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಹಾಗಾಗಿ ಶಿವಮೊಗ್ಗ ಪೊಲೀಸರಿಗೆ ಅಭಿನಂದನೆಗಳನ್ನು ಹೇಳಬೇಕು. ಯಾವುದೇ ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಿಲ್ಲ. ರಾಜ್ಯದ ಹಲವೆಡೆ ಪೊಲೀಸರ ವಿಶೇಷ ತಂಡ ದಾಳಿ ನಡೆಸುತ್ತಿದೆ ಎಂದು ಹೇಳಿದರು.