ಬೆಂಗಳೂರು : ವಿಚಾರಣೆಗೆ ಹಾಜರಾಗುವ ಮುನ್ನವೇ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ (SIT) ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಮೇ.31 ರಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ. ಅವರು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಮೊದಲು ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಬಂಧಿಸುವ ಸಾಧ್ಯತೆಯಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಅರೆಸ್ಟ್ ವಾರೆಂಟ್, ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಕಳೆದ 1 ತಿಂಗಳಿನಿಂದ ಏರ್ ಪೋರ್ಟ್ ನಲ್ಲಿ ಠಿಕಾಣಿ ಹೂಡಿರುವ ಎಸ್ ಐಟಿ ಅಧಿಕಾರಿಗಳು ಯಾವ ವಿಮಾನದಲ್ಲಿ ಬರ್ತಾನೆ ಎಂದು ಕಾದು ಕುಳಿತಿದ್ದಾರೆ.
ಮೇ.31 ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.ವಿದೇಶದಲ್ಲಿ ವಿಡಿಯೋ ಮೂಲಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ ‘ ನಾನು ನನ್ನ ತಂದೆ-ತಾಯಿ, ತಾತನ ಕ್ಷಮೆ ಕೇಳುತ್ತೇನೆ. ವಿದೇಶದಕ್ಕೆ ಹೋದ 3 -4 ದಿನದ ಬಳಿಕ ಪ್ರಕರಣದ ಬಗ್ಗೆ ತಿಳಿಯಿತು. ಮೇ 31 ರಂದು ಬೆಳಗ್ಗೆ 10 ಗಂಟೆಗೆ ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.