ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಎಸ್ ಐ ಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡಲು ಅವಕಾಶ ಸಿಕ್ಕಿದೆ.
ಪ್ರಜ್ವಲ್ ರೇವಣ್ಣ ಅವರು ಖುಷಿ ಖುಷಿಯಾಗಿಯೇ ವಿಶೇಷ ತನಿಖಾ ತಂಡ ಕಚೇರಿಯಲ್ಲಿ ಚುನಾವಣಾ ಫಲಿತಾಂಶ ವೀಕ್ಷಿಸುತ್ತಿದ್ದಾರೆ.
ಪ್ರಜ್ವಲ್ ರೇವಣ್ಣರನ್ನು 1 ವಾರ ಅಂದರೆ ಜೂನ್ 6 ವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.