ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ತಗ್ಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆಯ ಖಾಸಗಿ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲು ಸದನ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ಮೋಡ ಬಿತ್ತನೆಯ ಪ್ರಕ್ರಿಯೆಯನ್ನು ನಿರ್ಧರಿಸಲು, ಅನುಮೋದಿಸುವ ಸಂಬಂಧ ಮಂಡನೆಯಾದ ಖಾಸಗಿ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲು ಸದನ ಅನುಮೋದನೆ ನೀಡಿದೆ. ಶೂನ್ಯ ವೇಳೆ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ಕೆ. ಕೋಳಿವಾಡ ಕರ್ನಾಟಕ ಮೋಡ ಬಿತ್ತನೆ ವಿಧೇಯಕವನ್ನು ಪ್ರಸ್ತಾಪಿಸಿದ್ದು, ವಿಧೇಯಕದಲ್ಲಿನ ಅಂಶಗಳ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತಗ್ಗಿಸುವುದು, ಅಂತರ್ಜಲ ಮಟ್ಟ ಹೆಚ್ಚಳ, ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಳ ಸೇರಿದಂತೆ ಮುಂತಾದ ಕಾರಣಗಳಿಂದ ಮೋಡ ಬಿತ್ತನೆ ಕಾರ್ಯವನ್ನು ಪ್ರತೀ ವರ್ಷ ಮುಂಗಾರು, ಹಿಂಗಾರು ಅವಧಿಯಲ್ಲಿ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.