ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್..? ; ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.
ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್ ನೋಟಿಸ್ ನೀಡಿದ್ದರು. ಇದಾದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸ ಕೈಗೊಂಡಿದ್ದರು. ಇಂದು ಸೋಮವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ವಾಪಸ್ಸಾಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲ್ಲ ಅನ್ನುವ ವಿಶ್ವಾಸ ಇದೆ. ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.