ಬೆಂಗಳೂರು : ತಂದೆ-ತಾಯಿ ಇಲ್ಲದ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಅರ್ಜಿ ಸಲ್ಲಿಸಲು ಮಾರ್ಚ್, 10 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಿಕೆ, ಪ್ರತಿ ವಿದ್ಯಾರ್ಥಿಗೆ ಟೂತ್ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಸೋಪ್ ಕಿಟ್ ವಿತರಣೆ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತಿದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ 7676473767, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರುಂಬಾಡಿ, ವಿರಾಜಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 8105409405, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ, ದೂರವಾಣಿ ಸಂಖ್ಯೆ 8548068519 ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
