ಧಾರವಾಡ: ಪಿಎಸ್ಐ ನೇಮಕಾತಿ ಹಗರಣ ಬೆನ್ನಲೇ ತಮಗಾದ ಅನ್ಯಾಯವನ್ನು ಖಂಡಿಸಿ ಪಿಎಸ್ಐ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಉಂಟಾದ ಗೊಂದಲದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಗನ್ ಮ್ಯಾನ್ ಅಭ್ಯರ್ಥಿಗಳಿಗೆ ಥಳಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ವಿಶ್ವವಿದ್ಯಾಲಯದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪಿಎಸ್ಐ ಅಭ್ಯರ್ಥಿಗಳನ್ನು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿದ್ದು, ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು. ಈ ವೇಳೆ ಅಭ್ಯರ್ಥಿಗಳ ಸಮಸ್ಯೆಯನ್ನು ಆಲಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಸ್ಥಳದಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಹಾಗೂ ಆಯ್ಕೆಯಾಗದ ಅಭ್ಯರ್ಥಿಗಳ ನಡುವೆ ಗೊಂದಲವುಂಟಾಗಿದೆ.
BIG NEWS: ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ ಹೊರತು ರದ್ದಾಗಿಲ್ಲ; ಹೆಡ್ಗೆವಾರ್ ಪಾಠ ಕೈಬಿಡುವ ಪ್ರಶ್ನೆಯೂ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮರು ಪರೀಕ್ಷೆ ನಡೆಸದಂತೆ ಆಯ್ಕೆಯಾದ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಮರು ಪರೀಕ್ಷೆ ನಡೆಸುವಂತೆ ಆಯ್ಕೆಯಾಗದ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಅಭ್ಯರ್ಥಿಗಳ ನಡುವೆಯೇ ನೂಕು ನುಗ್ಗಲು ತಳ್ಳಾಟ ಆರಂಭವಾಗಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ಹೆಚ್ಚುತ್ತಿದ್ದಂತೆ ಕೋಪಗೊಂಡ ಮಾಜಿ ಸಿಎಂ ಕುಮಾರಸ್ವಾಮಿ ಗನ್ ಮ್ಯಾನ್ ಅಭ್ಯರ್ಥಿಗಳನ್ನು ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.