ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಬಂಧಿತ ಆರೋಪಿ. ಪಿಎಸ್ಐ ಆಗಿದ್ದುಕೊಂಡೇ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದರು. ಅಭ್ಯರ್ಥಿ ಹಾಗೂ ನೇಮಕಾತಿ ವಿಭಾಗದ ಮಧ್ಯವರ್ತಿಯಾಗಿ ಹರೀಶ್ ಕೆಲಸ ಮಾಡಿದ್ದರು. ನೇಮಕಾತಿ ವಿಭಾಗದ ಆರ್ ಎಸ್ ಐ ಜತೆ ನಿಕಟ ಸಂಪರ್ಕ ಹೊಂದಿದ್ದರು.
ಮಾಡಿ ನೋಡಿ ರುಚಿಕರವಾದ ನುಚ್ಚಿನುಂಡೆ
2019ರ ಬ್ಯಾಚ್ ನಲ್ಲಿ ಪಿಎಸ್ಐ ಆಗಿದ್ದ ಆರೋಪಿ ಹರೀಶ್ ಬ್ಯಾಡರಹಳ್ಳಿ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮವೆಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಇದೀಗ ಹರೀಶ್ ನನ್ನು ಬಂಧಿಸಲಾಗಿದ್ದು, ಕೋರ್ಟ್ ಗೆ ಹಾಜರುಪಡಿಸಲಾಗಿದೆ.