ಶಿವಮೊಗ್ಗ: ಪಿಎಸ್ಐ ಹುದ್ದೆ ನೇಮಕಾತಿ ಪ್ರಕರಣದಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ವಿಶೇಷ ಕೋರ್ಟ್ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವರು, ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆಯಾಗಬೇಕು. ಹಾಗಾಗಿ ಸ್ಪೆಷಲ್ ಕೋರ್ಟ್ ಬಗ್ಗೆ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.
ಹಗರಣದ ಬಗ್ಗೆ ಸಿಐಡಿ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 2.19 ಕೋಟಿ ಹಣ ಇಡಿ ವಶಕ್ಕೆ ಪಡೆದಿದೆ. ಕಲಬುರ್ಗಿಯಲ್ಲಿ 1 ಕೋಟಿ ವಶಕ್ಕೆ ಪಡೆಯಲಾಗಿದೆ. ಅಕ್ರಮದಲ್ಲಿ ಭಾಗಿಯಾದವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಪಿಎಸ್ಐ ಮರುಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ದಿನಾಂಕ ನಿಗದಿಗೆ ವಿಳಂಬ ಮಾಡಲಾಗುತ್ತಿದೆ. ಪ್ರಕರಣವನ್ನು ತಾರ್ಕಿಕ ಅಂತ್ಯ ಕಾಣಿಸುವುದೇ ನಮ್ಮ ಉದ್ದೇಶ ಎಂದರು.