ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿ ಪಿಯು ಬೋರ್ಡ್ ಮಹತ್ವದ ಆದೇಶ ಹೊರಡಿಸಿದೆ.
ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಪಿಯು ಬೋರ್ಡ್ ನಿಂದ ಹೊರಡಿಸಲಾದ ಈ ಆದೇಶ ಮಹತ್ವ ಪಡೆದುಕೊಂಡಿದೆ. 2022-23ನೇ ಶೈಕ್ಷಣಿಕ ವರ್ಷದಿಂದ ಪಿಯು ವಿದ್ಯಾರ್ಥಿಗಳು ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಈ ಬಗ್ಗೆ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಸಮವಸ್ತ್ರ ನಿಯಮ ಕಾಲೇಜಿನಲ್ಲಿ ಇಲ್ಲವಾದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ವಸ್ತ್ರ ಧರಿಸುವಂತಿಲ್ಲ. ಹೈಕೋರ್ಟ್ ನೀಡಿರುವ ತೀರ್ಪಿನಂತೆ ವಸ್ತ್ರ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.