alex Certify BIG NEWS: PU ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್; ಶುಲ್ಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PU ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್; ಶುಲ್ಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶುಲ್ಕ ಪಾವತಿಗೆ ಕೊಂಚ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.

ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕ ವಿನಾಯಿತಿ ನೀಡಿ, ಸದರಿ ಮೊತ್ತವನ್ನು ಪ್ರಾಂಶುಪಾಲರ ಖಾತೆಗೆ ಜಮೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಕಳೆದ ಎರಡು ವರ್ಷ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿದ್ದ ಶುಲ್ಕದಿಂದ ವಿನಾಯಿತಿಯನ್ನು 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ರೂ. ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ. ಶುಲ್ಕ ಮರುಪಾವತಿಗಾಗಿ ಲೆಕ್ಕಶೀರ್ಷಿಕೆ ಉಪಶೀರ್ಷಿಕೆ 103ರ ಅಡಿಯಲ್ಲಿ ಒದಗಿಸುವ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ-2ರ ತಂತ್ರಾಂಶದ ಮೂಲಕ ಬಿಡುಗಡೆಗೊಳಿಸಲು ಅಗತ್ಯಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...