ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ತುಮಕೂರಿನಲ್ಲಿ ಎನ್ಐಎ ಹಾಗೂ ಸಿಸಿಬಿ ತೀವ್ರ ಶೋಧ ನಡೆಸುತ್ತಿದೆ.
ಬುಧವಾರ ರಾತ್ರಿ ಪ್ರಾರಂಭವಾದ ಶೋಧ ಮತ್ತು ಗುರುವಾರ ಮುಂಜಾನೆಯವರೆಗೆ ಮುಂದುವರಿಯಿತು. ಸ್ಫೋಟದ ನಂತರ ಆರೋಪಿಗಳು ತುಮಕೂರಿಗೆ ಬಂದಿದ್ದಾರೆಯೇ ಎಂದು ಕಂಡುಹಿಡಿಯಲು ವಿಶೇಷ ತಂಡಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿವೆ.
ಇನ್ನೂ , ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.