alex Certify BIG NEWS : ರಾಜ್ಯದ ‘ಪಡಿತರ ಚೀಟಿ’ದಾರರ ಗಮನಕ್ಕೆ : EKYC, ಮ್ಯಾಪಿಂಗ್ ಮಾಡಿಸಲು ನಾಳೆಯೇ ಕೊನೆಯ ದಿನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರ ಗಮನಕ್ಕೆ : EKYC, ಮ್ಯಾಪಿಂಗ್ ಮಾಡಿಸಲು ನಾಳೆಯೇ ಕೊನೆಯ ದಿನ.!

ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.
ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...