ನವದೆಹಲಿ: ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸೆಂಟ್ರಲೈಜ್ಡ್ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಾಗುತ್ತದೆ. 2022-23ರಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ ಡಿಜಿಟಲ್ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಡಿಸಿಟಲ್ ಕರೆನ್ಸಿ ಬಿಡುಗಡೆಯಾಗಲಿದೆ. ಇದೇ ವರ್ಷದಲ್ಲಿ ಡಿಜಿಟಲ್ ಕರೆನ್ಸಿಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.