alex Certify BIG NEWS: RBIನಿಂದ ಮಹತ್ವದ ಘೋಷಣೆ; ಡಿ.1ರಿಂದ್ಲೇ ಆರಂಭ ಡಿಜಿಟಲ್‌ ರೂಪಾಯಿ ವಹಿವಾಟು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: RBIನಿಂದ ಮಹತ್ವದ ಘೋಷಣೆ; ಡಿ.1ರಿಂದ್ಲೇ ಆರಂಭ ಡಿಜಿಟಲ್‌ ರೂಪಾಯಿ ವಹಿವಾಟು….!

ಡಿಜಿಟಲ್‌ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ-ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಡಿಸೆಂಬರ್ 1 ರಿಂದ ರಿಟೇಲ್ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (ಸಿಬಿಡಿಸಿ) ಗಾಗಿ ಪ್ರಾಯೋಗಿಕವಾಗಿ ಡಿಜಿಟಲ್‌ ರೂಪಾಯಿ ಲಭ್ಯವಾಗಲಿದೆ.  RBI ನೀಡಿದ ಮಾಹಿತಿಯ ಪ್ರಕಾರ, ಡಿಸೆಂಬರ್ 1 ರಂದು, ಚಿಲ್ಲರೆ ವ್ಯಾಪಾರವು ಡಿಜಿಟಲ್ ರೂಪಾಯಿಗೆ (e₹-R) ಮೊದಲ ಬ್ಯಾಚ್ ಅನ್ನು ಪ್ರಾರಂಭಿಸುತ್ತದೆ. ಡಿಜಿಟಲ್ ರೂಪಾಯಿ, ಡಿಜಿಟಲ್ ಟೋಕನ್ ರೂಪದಲ್ಲಿರುತ್ತದೆ, ಅದು ಕಾನೂನು ಬದ್ಧವಾಗಿರುತ್ತದೆ.

ಪ್ರಸ್ತುತ ಕಾಗದದ ಕರೆನ್ಸಿ ಮತ್ತು ನಾಣ್ಯಗಳನ್ನು ವಿತರಿಸುವ ಅದೇ ಮುಖಬೆಲೆಯಲ್ಲಿ ಡಿಜಿಟಲ್ ರೂಪಾಯಿಯನ್ನು ನೀಡಲಾಗುತ್ತದೆ.ಡಿಸೆಂಬರ್ 1 ರಂದು ಕ್ಲೋಸ್ಡ್ ಯೂಸರ್ ಗ್ರೂಪ್ (ಸಿಯುಜಿ) ನಲ್ಲಿ ಆಯ್ದ ಸ್ಥಳಗಳಲ್ಲಿ ಈ ಪರೀಕ್ಷೆಯನ್ನು ಮಾಡಲಾಗುತ್ತದೆ ಎಂದು ಆರ್‌ಬಿಐ ತಿಳಿಸಿದೆ. ಇದು ಗ್ರಾಹಕ ಮತ್ತು ಬ್ಯಾಂಕ್ ವ್ಯಾಪಾರಿ ಇಬ್ಬರನ್ನೂ ಒಳಗೊಂಡಿರುತ್ತದೆ. ಇದೀಗ 4 ಬ್ಯಾಂಕ್‌ಗಳನ್ನು ಇದರಲ್ಲಿ ಸೇರಿಸಲಾಗಿದೆ

ವಹಿವಾಟು ಹೇಗೆ ನಡೆಯುತ್ತದೆ?

ವ್ಯಾಪಾರಿ ಸಂಸ್ಥೆಗಳಲ್ಲಿ ಕ್ಯೂಆರ್ ಕೋಡ್ ಬಳಸಿ ವ್ಯಾಪಾರಿಗಳಿಗೆ ಹಣ ಪಾವತಿಸಬಹುದು ಎಂದು ಆರ್‌ಬಿಐ ಹೇಳಿದೆ. ಪಾಲುದಾರ ಬ್ಯಾಂಕ್‌ಗಳು ನೀಡುವ ಡಿಜಿಟಲ್ ವ್ಯಾಲೆಟ್‌ಗಳ ಮೂಲಕ ಬಳಕೆದಾರರು ಇ-ಆರ್ (e₹-R) ನೊಂದಿಗೆ ವಹಿವಾಟು ನಡೆಸಲು ಸಾಧ್ಯವಾಗುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ (P2P) ಮತ್ತು ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳು ಎರಡೂ ಆಗಿರಬಹುದು. ಈ ಪ್ರಾಯೋಗಿಕ ವಹಿವಾಟಿನ ಪರೀಕ್ಷೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಐಸಿಐಸಿಐ ಬ್ಯಾಂಕ್ ಸೇರಿದಂತೆ ನಾಲ್ಕು ಬ್ಯಾಂಕ್‌ಗಳು ಪಾಲ್ಗೊಳ್ಳಲಿವೆ. ಇದನ್ನು ದೆಹಲಿ, ಮುಂಬೈ, ಬೆಂಗಳೂರು ಮತ್ತು ಭುವನೇಶ್ವರದಲ್ಲಿ ಪರೀಕ್ಷಿಸಲಾಗುತ್ತದೆ. ಡಿಜಿಟಲ್ ರೂಪಾಯಿಯನ್ನು ಬ್ಯಾಂಕ್‌ಗಳ ಮೂಲಕ ವಿತರಿಸಲಾಗುವುದು ಮತ್ತು ಪೈಲಟ್ ಪರೀಕ್ಷೆಯಲ್ಲಿ ಭಾಗವಹಿಸುವ ಬ್ಯಾಂಕ್‌ಗಳು ನೀಡುವ ಡಿಜಿಟಲ್ ವ್ಯಾಲೆಟ್‌ಗಳ ಮೂಲಕ ಬಳಕೆದಾರರು ಇ-ರೂಪಾಯಿಯಲ್ಲಿ ವಹಿವಾಟು ನಡೆಸಲು ಸಾಧ್ಯವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...