![](https://kannadadunia.com/wp-content/uploads/2020/12/vidhana-soudha-750-1-jpg_710x400xt-1.jpg)
ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್ ಸೆಂಟರ್ ಗಳ ನೋಂದಣಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಎಗ್ಗಿಲ್ಲದೇ ತಲೆಯೆತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ಗಳು ಇನ್ಮುಂದೆ ರಾಜ್ಯ ಸರ್ಕಾರಕ್ಕೆ 25 ಸಾವಿರ ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಐಎಎಸ್, ಐಪಿಎಸ್, ಐಎಫ್ ಎಸ್, ಕೆಎಎಸ್, ಭಾಷಾ ಕೋಚಿಂಗ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಸಂಸ್ಥೆಗಳು ಕಾಲೇಜು ಶಿಕ್ಷಣ ಇಲಾಖೆಗೆ 25 ಸಾವಿರ ರೂ. ಶುಲ್ಕ ಕಟ್ಟಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.