ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ‘ಡಿ ಗ್ಯಾಂಗ್’ ತನಿಖಾ ತಂಡಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ತಂಡ ತನಿಖೆಗೆ ಬೇಕಾಗಿರುವ ಹಾರ್ಡ್ ಡಿಸ್ಕ್ ಸೇರಿದಂತೆ ಎಲ್ಲಾ ವಸ್ತುಗಳ ಖರೀದಿಗೆ ತಮ್ಮ ಸ್ವಂತ ಹಣವನ್ನು ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಖರ್ಚನ್ನು ಪೊಲೀಸರೇ ಭರಿಸಿದ್ದು, ಬಿಲ್ ಮಂಜೂರು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.