ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿಜೇತರ ವಿವರ ಈ ಕೆಳಗಿನಂತಿದೆ.
ಪ್ರೌಢಶಾಲೆ ವಿಭಾಗ :
ಪ್ರಥಮ : ದಿವ್ಯಾ ಶ್ರೀಶೈಲ ಗಾಣಿಗೇರ, ಸರ್ಕಾರಿ ಪ್ರೌಢಶಾಲೆ, ಕೆಎಸ್ಆರ್ಪಿ, ಮಚ್ಚೆ, ಬೆಳಗಾವಿ
ದ್ವಿತೀಯ : ಸಮರ್ಥ ನಾಗರಾಜ ಅರ್ಕಸಾಲಿ, ಸರ್ಕಾರಿ ಪ್ರೌಢಶಾಲೆ, ಹುನಗುಂದ, ಮುಂಡಗೋಡ ತಾಲೂಕು, ಉತ್ತರ ಕನ್ನಡ
ತೃತೀಯ : ಚೈತನ್ಯ ಕೆ.ಎಂ., ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು
ಪದವಿಪೂರ್ವ ಕಾಲೇಜು ವಿಭಾಗ:
ಪ್ರಥಮ : ವಿಜಯಕುಮಾರ್ ಬ. ದೊಡ್ಡಮನಿ, ಸರ್ಕಾರಿ ಪದವಿಪೂರ್ವ ಕಾಲೇಜು ಮುಳಗುಂದ, ಗದಗ
ದ್ವಿತೀಯ : ಪರೀಕ್ಷಾನಂದ್, ಮರಿಮಲ್ಲಪ್ಪ ಪದವಿಪೂರ್ವ ಕಾಲೇಜು, ಮೈಸೂರು
ತೃತೀಯ : ಗೋರಮ್ಮ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಕೋಲಾರ
ಪದವಿ / ಸ್ನಾತಕೋತ್ತರ ವಿಭಾಗ:
ಪ್ರಥಮ : ಪ್ರವೀಣ್ ನಿಂಗಪ್ಪ ಕಿತ್ನೂರ, ಕನ್ನಡ ವಿ.ವಿ. ಹಂಪಿ, ವಿಜಯನಗರ
ದ್ವಿತೀಯ : ಶರಣಪ್ಪ, ತುಮಕೂರು ವಿ.ವಿ., ತುಮಕೂರು
ತೃತೀಯ : ನಸೀಮಾ ಇ. ಚಪ್ಪರಬಂದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ
ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರಾಜ್ಯಾದ್ಯಂತ ಪ್ರೌಢಶಾಲೆ ವಿಭಾಗದಲ್ಲಿ 1,24,392 ವಿದ್ಯಾರ್ಥಿಗಳು, ಪದವಿಪೂರ್ವ ವಿಭಾಗದಲ್ಲಿ 12,840 ವಿದ್ಯಾರ್ಥಿಗಳು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ 17,062 ವಿದ್ಯಾರ್ಥಿಗಳು ಸೇರಿ ಒಟ್ಟು 1,54,294 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ₹31,000, ದ್ವಿತೀಯ ₹21,000 ಹಾಗೂ ₹11,000 ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರಗಳು ಬಹುಮಾನವಾಗಿ ಸಿಗಲಿದೆ. ವಿಜೇತರಿಗೆ ಅಕ್ಟೋಬರ್ 2 ರಂದು ಸಂಜೆ 4.30ಕ್ಕೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನಾ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.