ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗುತ್ತಿದೆ. ಜಲ ಮೂಲಗಳನ್ನು ಗುರುತಿಸುವುದು ಮತ್ತು ನೀರಿನ ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಈ ಕುರಿತು ಅಧ್ಯಯನ ನಡೆಸಲು ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳ ತಜ್ಞರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ‘ಜಲ ಆಡಿಟ್ ಸಮಿತಿ’ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.