alex Certify BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 2,106 ಕೋಟಿ ರೂ. ವೆಚ್ಚ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 2,106 ಕೋಟಿ ರೂ. ವೆಚ್ಚ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು  ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು  ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದ್ದಾರೆ.

ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್‌ ಅಂತ್ಯದ ಒಳಗೆ ರೂಪಿಸಬೇಕು. ಎಸ್‌.ಸಿ.ಎಸ್‌.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು.  ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...